PSI' ನೇಮಕಾತಿ ಹಗರಣ : ಮತ್ತೊಬ್ಬ ಪ್ರಮುಖ ಆರೋಪಿ ಅರೆಸ್ಟ್

PSI' ನೇಮಕಾತಿ ಹಗರಣ : ಮತ್ತೊಬ್ಬ ಪ್ರಮುಖ ಆರೋಪಿ ಅರೆಸ್ಟ್

ಬೆಂಗಳೂರು : ಪಿಎಸ್ ಐ ನೇಮಕಾತಿ ಹಗರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಆಗಿದ್ದ ನವೀನ್ ಎಂಬುವರನ್ನು ಸೋಮವಾರ ಬಂಧಿಸಲಾಗಿದೆ.

ಅಕ್ರಮ ಪ್ರಕರಣದಲ್ಲಿ ತನಿಖಾ ತಂಡಕ್ಕೆ ದಾಖಲೆಗಳು ಲಭಿಸಿದ ಬಳಿಕ ನವೀನ್ ನಾಪತ್ತೆಯಾಗಿದ್ದ.‌ ಕಳೆದ ಮೇ ತಿಂಗಳಿಂದ ನವೀನ್‌ಗಾಗಿ ಸಿಐಡಿ ತಂಡವು ಹುಡುಕಾಟ ನಡೆಸುತ್ತಿತ್ತು.

ನಿನ್ನೆ ನಂದಿನಿ ಲೇಔಟ್‌ನ ಮನೆಯೊಂದರಲ್ಲಿ ಆರೋಪಿ ನವೀನ್ ನನ್ನು ಬಂಧಿಸಲಾಗಿದೆ. ಪಿಎಸ್ ಐ ನೇಮಕಾತಿ ಪ್ರಕರಣದಲ್ಲಿ ನವೀನ್ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ ಎನ್ನಲಾಗಿದೆ.