ಪನಾಮಾ ಪೇಪರ್ಸ್ ಲೀಕ್: ಬಾಲಿವುಡ್ ನಟಿ ಐಶ್ವರ್ಯಾ ರೈಗೆ ಮತ್ತೆ ಸಂಕಷ್ಟ; ಇಡಿ ಸಮನ್ಸ್ ಜಾರಿ

ಮುಂಬೈ: ಪನಾಮಾ ಪೇಪರ್ಸ್ ಲೀಕ್ (Panama Papers Leak) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಸಮನ್ಸ್ ಜಾರಿ(ED Summons) ಮಾಡಿದೆ.
ಜಾರಿ ನಿರ್ದೇಶಾನಾಲಯ (Enforcement Directorate) ಸಂಸ್ಥೆಯು ತನಿಖೆ ನಡೆಸುತ್ತಿರುವ ಪ್ರಕರಣವೊಂದಕ್ಕೆ ಸಂಬಂಧಿಸಿ ನಟಿ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.
Enforcement Directorate summons Aishwarya Rai Bachchan in a case being investigated by the agency: Sources
— ANI (@ANI) December 20, 2021
(file photo) pic.twitter.com/7s2QPI7yjm
'ಪನಾಮಾ ಪೇಪರ್ಸ್' ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ಈ ಸಮನ್ಸ್ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (Enforcement Directorate) ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಿದೆ. 2016ರಿಂದಲೂ ಪನಾಮಾ ಪೇಪರ್ಸ್ ಲೀಕ್ ಪ್ರಕರಣ ಸದ್ದು ಮಾಡುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಈ ಮೊದಲೇ ಜಾರಿ ನಿರ್ದೇಶನಾಲಯಕ್ಕೆ ಕೆಲವು ದಾಖಲೆ ಪತ್ರಗಳನ್ನು ಒಪ್ಪಿಸಿದ್ದರು. ಈಗ ಮತ್ತೆ ಸಮನ್ಸ್ ನೀಡಿರುವುದು ಅಚ್ಚರಿ ಮೂಡಿಸಿದೆ.
ಮೂಲಗಳ ಪ್ರಕಾರ ದೆಹಲಿಯಲ್ಲಿ ಇರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಇಂದು (ಡಿ.20) ಹಾಜರಾಗುವಂತೆ ಐಶ್ವರ್ಯಾ ರೈ ಅವರಿಗೆ ಸಮನ್ಸ್ ನೀಡಲಾಗಿದೆ. ಮುಂಬೈನಲ್ಲಿರುವ ಅವರ 'ಪ್ರತೀಕ್ಷಾ' ನಿವಾಸಕ್ಕೆ ಸಮನ್ಸ್ ತಲುಪಿದೆ. 15 ದಿನಗಳ ಒಳಗೆ ಪ್ರತಿಕ್ರಿಯಿಸುವಂತೆ ಅದರಲ್ಲಿ ತಿಳಿಸಲಾಗಿದೆ ಎನ್ನಲಾಗಿದೆ.