ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಕೊಂಚ ಇಳಿಕೆ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಲೀಟರಿಗೆ 20 ಪೈಸೆಯಷ್ಟು ಕಡಿಮೆ ಮಾಡಿವೆ.
ಇದರಿಂದಾಗಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರಿಗೆ ₹ 101.64 ಮತ್ತು ಡೀಸೆಲ್ ದರ ಲೀಟರಿಗೆ ₹ 89.07ಕ್ಕೆ ತಲುಪಿದೆ. ಬಿಪಿಸಿಎಲ್ ಜಾಲತಾಣದಲ್ಲಿ ಇರುವ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ ಪೆಟ್ರೋಲ್ ದರ ₹ 105.19 ಮತ್ತು ಡೀಸೆಲ್ ದರ ₹ 94.55ರಷ್ಟಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರವು ಮೇ ತಿಂಗಳ ನಂತರದ ಕನಿಷ್ಠ ಮಟ್ಟಕ್ಕೆ ಇಳಿಕೆ ಆಗಿರುವುದರಿಂದ ಇಂಧನ ದರದಲ್ಲಿ ಇಳಿಕೆ ಮಾಡಲಾಗಿದೆ. ಆಗಸ್ಟ್ 18ರಿಂದ ಇಲ್ಲಿಯವರೆಗೆ ಒಟ್ಟು ನಾಲ್ಕು ಬಾರಿ ಡೀಸೆಲ್ ದರ ಕಡಿತ ಮಾಡಲಾಗಿದೆ. ಆದರೆ, ಈ ಅವಧಿಯಲ್ಲಿ ಒಂದು ಬಾರಿ ಮಾತ್ರ ಪೆಟ್ರೋಲ್ ದರ ಇಳಿಕೆ ಆಗಿದೆ.
ಮೇ 4ರಿಂದ ಜುಲೈ 17ರವರೆಗಿನ ಅವಧಿಯಲ್ಲಿ ಪೆಟ್ರೋಲ್ ದರವನ್ನು ಲೀಟರಿಗೆ ₹ 11.44ರಷ್ಟು ಮತ್ತು ಡೀಸೆಲ್ ದರ ಲೀಟರಿಗೆ ₹ 9.14ರಷ್ಟು ಏರಿಕೆ ಮಾಡಲಾಗಿತ್ತು.