ಪೆಟೋಲ್ ಕದ್ದ ಕದೀಮ | Bangalore |

ದೇಶದೆಲ್ಲೆಡೆ ಪೆಟ್ರೋಲ್ ಬೆಲೆ ಗಗನಕ್ಕೇರಿದೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಪೆಟ್ರೋಲ್ ಕಳ್ಳರ ಹಾವಳಿ ಜೋರಾಗಿದೆ. ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಮನೆ ಮುಂದೆ ನಿಲ್ಲಿಸಿದ ಬೈಕ್ ನಿಂದ ಪೆಟ್ರೋಲ್ ಕಳ್ಳತನವಾಗಿದೆ. ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, ಪೆಟ್ರೋಲ್ ಕಳ್ಳತನ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.