ಚುನಾವಣೋತ್ತರ ಹಿಂಸಾಚಾರ:ಸಿಬಿಐ ತನಿಖೆ ವಹಿಸಿದ ಕೋಲ್ಕತ್ತಾ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ. ಬಂಗಾಳ ಸರ್ಕಾರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ವೇಳೆ ಸಂಭವಿಸಿರುವ ಕೊಲೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವಂತೆ ಕೇಂದ್ರೀಯ ತನಿಖಾ ಸಂಸ್ಥೆಗೆ ನಿರ್ದೇಶಿಸಿರುವ ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.
ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿರುವ ಮನವಿಯ ವಿಚಾರಣಾ ಸಂಖ್ಯೆಯನ್ನು ಸುಪ್ರೀಂ ಕೋರ್ಟ್‌ ಇನ್ನಷ್ಟೇ ನಿರ್ಧರಿಸಬೇಕಿದೆ. ತನಿಖೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ರಾಜ್ಯ ಸರ್ಕಾರವು ಸಿಬಿಐಗೆ ಒದಗಿಸಬೇಕು ಎಂದು ಕೋಲ್ಕತ್ತಾ ಹೈಕೋರ್ಟ್‌ ಆದೇಶಿಸಿದೆ. ಇತರ ಪ್ರಕರಣ ವಿಚಾರಣೆಯ ಜವಾಬ್ದಾರಿಯನ್ನು ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್‌ ವಹಿಸಿರುವ ಹೈಕೋರ್ಟ್‌ ತನಿಖೆಗೆ ಸಹಕಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಇದನ್ನು ಪ್ರಶ್ನಿಸಿ ಈಗ ಪಶ್ಚಿಮ ಬಂಗಾಳದ ಟಿಏಂಸಿ ಸರ್ಕಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ.