ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆ ಚುರುಕು

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆ ಚುರುಕು

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಒಂಬತ್ತು ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

ಹಿಂಸಾಚಾರ ಪ್ರಕರಣಗಳ ತನಿಖೆಗೆ ನಿಯೋಜಿಸಿರುವ ಎಲ್ಲ ತನಿಖಾ ಸಂಸ್ಥೆಗಳ ವಿಶೇಷ ಘಟಕಗಳು ಕೋಲ್ಕತ್ತದಿಂದ ಬೇರೆ ಬೇರೆ ಕಡೆ ಘಟನೆಗಳು ನಡೆದಿರುವ ಜಾಗಗಳಿಗೆ ಸ್ಥಳಾಂತರಗೊಂಡಿವೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ಪ್ರಕರಣಗಳು ನೋಂದಣಿ ಪ್ರಕ್ರಿಯೆಯಲ್ಲಿವೆ. ಅವುಗ ಳಲ್ಲಿ ಕೆಲವನ್ನು ರಾಜ್ಯ ಸರ್ಕಾರ ತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸಿದೆ. ಈ ವರ್ಷದ ಆರಂಭದಲ್ಲಿ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರ ಕುರಿತು ತನಿಖೆಯನ್ನು ಕಲ್ಕತ್ತಾ ಹೈಕೋರ್ಟ್‌ ಸಿಬಿಐಗೆ ವಹಿಸಿತ್ತು.