ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆ
ಸರ್ಕಾರದ ಒತ್ತಡಕ್ಕೆ ಮಣಿದು ಪ್ರಾದೇಶಿಕ ಆಯುಕ್ತರು ದಿಢೀೀರನೆ ಮೇಯರ್ ಚುನಾವಣೆ ಮುಂದೂಡಿದ್ದಾರೆ ಎಂದು ಕಲಬುರಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ನಗರದಲ್ಲಿ ಕೆಪಿಸಿಸಿ ವಕ್ತಾರ ಡಾ.ಶರಣಪ್ರಕಾಶ್ ಪಾಟೀಲ ಹೇಳಿದ್ದಾರೆ. ಸರ್ಕಾರ ಅಧಿಕಾರಿಗಳ ಮೂಲಕ ಪ್ರಜಾಪ್ರಭುತ್ವಕ್ಕೆ ತಿಲಾಂಜಲಿ ಇಡುತ್ತಿದ್ದು, ಚುನಾವಣೆ ಆಯೋಗದಿಂದ ಯಾವುದೇ ನಿರ್ದೇಶನ ಇಲ್ಲದೇ ಇದ್ದರೂ ಮುಂದೂಡಿದ್ದಾರೆ. ಬಿಜೆಪಿ ಯವರು ಹಿಂಬಾಗಿಲಿನಿಂದ ಅಧಿಕಾರ ಹಿಡಿಯಲು ಹಾಗೂ ವಿಧಾನಪರಿಷತ್ ಸದಸ್ಯರ ಹೆಸರನ್ನು ಸ್ಥಳೀಯ ಮತದಾರರ ಪಟ್ಟಿಯಲ್ಲಿ ಸೇರಿಸಲು ಮುಂದಾಗಿದ್ದಾರೆ. ನಿಗದಿತ ದಿನದಂದೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದರು.