ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ
ಜನತಾ ಶಿಕ್ಷಣ ಸಮಿತಿ ಹಾಗೂ ಶ್ರೀ ಮಂಜುನಾಥೇಶ್ವರ ಸ್ನಾತಕೋತ್ತರ ಅಧ್ಯಯನ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಧಾರವಾಡದಲ್ಲಿ ಇಂದು ಬ್ರಹತ್ ಕೋವಿಡ್ ಲಸಿಕಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಲಸಿಕಾ ಅಭಿಯಾನವನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹಾಗೂ
ಆಡಳಿತಾಧಿಕಾರಿ ಡಾ. ಆಜೀತ್ ಪ್ರಸಾದ ಚಾಲನೆ ನೀಡಿದರು.
ಜೆ. ಎಸ್. ಎಸ್ ಕಾಲೇಜಿನ ಸನ್ನಿಧಿ ಸಭಾಭವನದಲ್ಲಿ ನಡೆದ ಈ ಉಚಿತ ಲಸಿಕಾ ಅಭಿಯಾನದಲ್ಲಿ 18 ವರ್ಷ ಮೇಲ್ಪಟ್ಟ ಅನೇಕ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.
ಕಾಲೇಜಿನ ಆಡಳಿತ ಮಂಡಳಿ ಕೋವಿಡ್ ಲಸಿಕಾ ವಿತರಣೆಯನ್ನು ಬಹಳ ಅಚ್ಚುಕಟ್ಟಾಗಿ ಹಾಗೂ ಶಿಸ್ತುಬದ್ಧವಾಗಿ ಏರ್ಪಡಿಸಿತ್ತು. ಇಂತಹ ಒಂದು ಶಿಸ್ತುಬದ್ಧವಾದ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಜೆ. ಎಸ್. ಎಸ್ ಸಂಸ್ಥೆಗೆ ಅಭಿನಂದನೆ ಸಲ್ಲಿಸಿದೆ.
ಕಾರ್ಯಕ್ರಮದಲ್ಲಿ ಡಾ ಕವನ ದೇಶಪಾಂಡೆ, ಡಾ. ರತ್ನಾ, ಮಹಾವೀರ ಉಪಾಧ್ಯೆ ಶ್ರೀ ಜಿಣ್ಣಪ್ಪನವರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು