'ಡಿಟೆಕ್ಟಿವ್ ತೀಕ್ಷ್ಣ' ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಪ್ರಿಯಾಂಕ ಉಪ್ಪೇಂದ್ರ

'ಡಿಟೆಕ್ಟಿವ್ ತೀಕ್ಷ್ಣ' ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಪ್ರಿಯಾಂಕ ಉಪ್ಪೇಂದ್ರ

ಪ್ರಿಯಾಂಕಾ ಉಪೇಂದ್ರ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಆದರೆ, ಪ್ರಿಯಾಂಕ ಉಪೇಂದ್ರ ಅವರ ಪಾತ್ರ ರಿವೀಲ್ ಆಗಿದೆ.

ತ್ರಿವಿಕ್ರಮ ರಘು ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದಲ್ಲಿ ಪ್ರಿಯಾಂಕ ಉಪೇಂದ್ರ 'ಡಿಟೆಕ್ಟಿವ್ ತೀಕ್ಷ್ಣ' ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿರುವ ಈ ಚಿತ್ರದ ಪೋಸ್ಟರ್‌ನಲ್ಲಿ ಪ್ರಿಯಾಂಕಾ ಉಪೇಂದ್ರಗೆ 'ಆಕ್ಷನ್ ಕ್ವೀನ್' ಎಂಬ ಬಿರುದು ನೀಡಲಾಗಿದೆ. ಹೀಗಾಗಿ 'ಡಿಟೆಕ್ಟಿವ್ ತೀಕ್ಷ್ಣ' ಆಗಿ ಪ್ರಿಯಾಂಕಾ ಉಪೇಂದ್ರ ಸಿನಿಮಾದಲ್ಲಿ ಸಿಕ್ಕಾಪಟ್ಟೆ ಆಕ್ಷನ್ ಮಾಡಬಹುದು ಎಂಬ ನಿರೀಕ್ಷೆ ಮೂಡಿದೆ.

ಗೌತಮ್ ಸಿನಿಮಾಸ್ ಪ್ರೈವೇಟ್ ಲಿಮಿಟೆಡ್ ಸಹಯೋಗದಲ್ಲಿ ಶ್ರೀದೇವಿ ಕ್ರಿಯೇಷನ್ ಬ್ಯಾನರ್ ಅಡಿ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಸಿನಿಮಾ ತಯಾರಾಗುತ್ತಿದೆ. ಮಹೂರ್ತದ ದಿನ ಚಿತ್ರದ ಶೀರ್ಷಿಕೆ ಪ್ರಕಟಿಸಲಾಗುವುದು. ಉಳಿದ ಕಲಾವಿದರ ಆಯ್ಕೆ ಮತ್ತು ಸಂಗೀತ ನಿರ್ದೇಶಕರ ಆಯ್ಕೆ ನಂತರ ಮಾಡಲಾಗುವುದು.

ಚಿತ್ರಕ್ಕೆ ಮನು ದಾಸಪ್ಪ ಛಾಯಾಗ್ರಹಣವಿದೆ. ಸೆಪ್ಟೆಂಬರ್‌ನಲ್ಲಿ ಈ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೂಡಿಗೆರೆ, ಚಿಕ್ಕಮಗಳೂರು ಮತ್ತು ಉಪ್ಪಿನಂಗಡಿ ಸುತ್ತಮುತ್ತ ಶೂಟಿಂಗ್ ನಡೆಯಲಿದೆ.