ವಿಧಾನ ಪರಿಷತ್ ಚುನಾವಣೆ ವೇಳಾಪಟ್ಟಿ ಪ್ರಕಟ
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೀದರ ಜಿಲ್ಲೆಯಲ್ಲಿ ಒಟ್ಟು 3423 ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಲು ಅರ್ಹರಾಗಿರುತ್ತಾರೆ. ನವೆಂಬರ್ 16ರಂದು ಅಧಿಸೂಚನೆ ಹೊರಡಿಸಲಾಗುತ್ತದೆ., ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 23 ಕೊನೆಯ ದಿನಾಂಕವಾಗಿದೆ. ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ನವೆಂಬರ್ 26 ಕೊನೆಯ ದಿನ. ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಡಿಸೆಂಬರ್ 14ರಂದು ಮತ ಎಣಿಕೆ ನಡೆಯಲಿದೆ. ಡಿಸೆಂಬರ್ 16ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಇದ್ದರು.