ರೈತ ವಿರೋಧಿ ಕಾಯ್ದೆ ತಡೆಹಿಡಿಯಲು ಸೆ13ರಂದು ವಿಧಾನಸೌಧ ಮುತ್ತಿಗೆ | Chikkaballapur |
ರೈತ ವಿನಾಶಕಾರಿ ಕಾಯಿದೆಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆಗಳನ್ನು ವಾಪಸ್ಸು ಪಡೆಯಬೇಕೆಂದು ಒತ್ತಾಯಿಸಿ ರಾಜ್ಯ ರೈತಸಂಘದಿಂದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತ್ರತ್ವದಲ್ಲಿ ಸೆಪ್ಟಂಬರ್ 13 ರಂದು ವಿಧಾನಸೌಧ ಮುತ್ತಿಗೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಪ್ರತಿಭಟನೆಯ ಮಾಹಿತಿ ನೀಡಿ, ಬಿಜೆಪಿ ಜನ ವಿರೋಧಿ ಅನುಸರಿಸುತ್ತಿದೆ ಎಂದು ಕಿಡಿಕಾರಿದರು. ಈ ಸುದ್ದಿಗೋಷ್ಟಿಯಲ್ಲಿ ಜಿಲ್ಲಾದ್ಯಕ್ಷ ಗುಡಿಬಂಡೆ ರಾಮು, ಪ್ರಧಾನಕಾರ್ಯದರ್ಶಿ ವೇಣುಗೋಪಾಲ್, ತಾಲ್ಲೂಕು ಅಧ್ಯಕ್ಷರುಗಳಾದ ರಾಮಾಂಜಿನಪ್ಪ, ತಾದೂರು ಮಂಜುನಾಥ್ ಇತರರು ಹಾಜರಿದ್ದರು.