ಅಭಿವ್ಯಕ್ತಿ ಸ್ವಾತಂತ್ರ್ಯ ರಕ್ಷಣೆ: ಪತ್ರಕರ್ತರಿಬ್ಬರಿಗೆ ನೊಬೆಲ್ ಶಾಂತಿ ಪ್ರಶಸ್ತಿ

ಸ್ಟಾಕ್‌ಹೋಮ್: ರಷ್ಯಾ ಮತ್ತು ಫಿಲಿಪ್ಪೀನ್ಸ್ ಇಬ್ಬರು ಪತ್ರಕರ್ತರಿಗೆ ಶುಕ್ರವಾರ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ವಿಶ್ವಾದ್ಯಂತ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ದಕ್ಕೆಯಾಗಿದೆ ಎಂದು ಅಭಿಪ್ರಾಯಪಟ್ಟಿರುವ ಪ್ರಶಸ್ತಿ ಸಮಿತಿಯು, ಅದರ ರಕ್ಷಣೆಗಾಗಿ ಈ ಇಬ್ಬರೂ ಪತ್ರಕರ್ತರು ನಡೆಸಿದ ಪ್ರಯತ್ನವನ್ನು ಮನ್ನಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಿದೆ.