ಗ್ರಾಪಂ ಸದಸ್ಯರಿಂದ ಬೇಡಿಕೆಗೆ ಪ್ರತಿಭಟನೆ...|Dharwad|

ನರೇಗಾ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರಿಗೆ ಸಂಬಳ ಪಾವತಿ ಮಾಡದೇ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಗ್ರಾಮ ಪಂಚಾಯತ್ ಸದಸ್ಯರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ತಾಲೂಕಿನ ಗ್ರಾಪಂ ಸದಸ್ಯರು ಸೇರಿ ಜಿಲ್ಲಾಡಳಿತದ ವಿರುದ್ಧ ದಿಕ್ಕಾರ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಇನ್ನು ಗ್ರಾಮ ಪಂಚಾಯತ್ ಸದಸ್ಯರು ಕೂಡಲೇ ಫಲಾನುಭವಿಗಳಿಗೆ ಸಂಬಳ ನೀಡುವಂತೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಗ್ರಾಮ ಪಂಚಾಯತ ಸದಸ್ಯ ಬಸವರಾಜ್ ಅಮರಗೋಳ ಗ್ರಾಮ ಪಂಚಾಯಿತಿಗಳಿಗೆ 15 ಹಣಕಾಸಿನ ಯೋಜನೆಯಡಿಯಲ್ಲಿ ನೀಡುತ್ತಿರುವ ಅನುದಾನವು ಪಂಚಾಯತಿ ಅಭಿವೃದ್ಧಿಗೆ ಬೇಡಿಕೆಗೆ ಅನುಗುಣವಾಗಿ ಸಾಕಾಗುತ್ತಿಲ್ಲ. ಗ್ರಾಮಗಳಲ್ಲಿನ ಬಿಪಿಎಲ್ ಕುಟುಂಬಗಳಿಗೆ ಆಶ್ರಯ ಮನೆಗಳನ್ನು ನೀಡುತ್ತಿಲ್ಲ. ಕಳೆದ ನಾಲ್ಕೈದು ವರ್ಷಗಳಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಮನೆಗಳ ನಿರ್ಮಾಣ ಮಾಡಿಲ್ಲ. ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಬಹಳಷ್ಟು ತೊಡಕಾಗಿದ್ದು, ಕೂಡಲೇ ಅವುಗಳನ್ನು ನಿವಾರಣೆ ಮಾಡಬೇಕೆಂದು ಮನವಿ ಮಾಡಿದರು.