ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ

ಚಿಕ್ಕಮಗಳೂರು ದೆಹಲಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ಖಂಡಿಸಿ ವಿವಿಧ ಪಕ್ಷ ಹಾಗೂ ಸಂಘಟನೆಗಳ ಆಶ್ರಯದಲ್ಲಿ ಇಂದು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ದೇಶದ ವಿವಿಧ ಭಾಗಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿದ್ದು, ಶೀಘ್ರ ಅಪರಾಧಿಗಳಿಗೆ ತಕ್ಷಕ ಶಿಕ್ಷೆ ವಿಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಉತ್ತರ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳನ್ನು ರಕ್ಷಿಸಿ ದೂರುದಾರರ ವಿರುದ್ಧವೇ ಪ್ರಕರಣ ದಾಖಲಿಸಿ ಸಾಕ್ಷಿಗಳನ್ನು ನಾಶ ಮಾಡಿರುವ ಉದಾಹರಣೆಗಳಿವೆ. ಈ ಪ್ರಕರಣದಲ್ಲಿ ಶೀಘ್ರ ಬಾಲಕಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ನ ರೇಖಾ ಹುಲಿಯಪ್ಪಗೌಡ, ಎಂ.ಎಲ್ ಮೂರ್ತಿ, ಕೂದುವಳ್ಳಿ ಮಂಜು, ಜೆಡಿಎಸ್ ನ ಹೆಚ್.ಹೆಚ್ ದೇವರಾಜ್, ರಾಧಾಕೃಷ್ಣ ಪಾಲ್ಗೊಂಡಿದ್ದರು.