ಕೇಂದ್ರ ಸರ್ಕಾರದ ನಿಲುವು ಖಂಡಿಸಿ ಪ್ರತಿಭಟನೆ
ಧಾರವಾಡ.
ಅಗತ್ಯ ವಸ್ತುಗಳ ಭಾರಿ ಬೆಲೆ ಏರಿಕೆ ಮಾಡ್ತಿರುವ ಕೇಂದ್ರ ಸರ್ಕಾರದ ನಿಲುವು ಖಂಡಿಸಿ, ಧಾರವಾಡದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ನಗರದ ಜಿಲ್ಲಾಧಿಕಾರಿ ಕಛೇರಿ ಎದುರು ಜಮಾಯಿಸಿದ ಸಂಘಟನೆಕಾರರು ಬಿಜೆಪಿ ಸರ್ಕಾರಗಳ ಲೂಟಿಕೋರ ಕುಟಿಲ ನೀತಿಗಳನ್ನು ವಿರುದ್ದಿಸಿ ಕೇಂದ್ರ ಮೋದಿ ಸರ್ಕಾರದ ವಿರುದ್ಧ ಧಿಕ್ಕಾರ ಕೋಗಿ ಆಕ್ರೋಶ ಹೊರಹಾಕಿದ್ರು. ಇನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಕರೆ ನೀಡಿತ್ತು.ಅದ್ರಂತೆ ಇಂದು ಎಲ್ಲಾ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದ್ರು