ದೇವಸ್ಥಾನ ಧ್ವಂಸ ಪ್ರಕರಣ ಖಂಡಿಸಿ ಪ್ರತಿಭಟನೆ

ದೇವಸ್ಥಾನ ಧ್ವಂಸ ಪ್ರಕರಣ ಖಂಡಿಸಿ ಗದಗ ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮ ಪಂಚಾಯ್ತಿ ಎದುರು ಭಗ್ವಾ ಧ್ವಜ ಹಿಡಿದು ಭಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದೇವಸ್ಥಾನ ಧ್ವಂಸ ಮಾಡಲು ಆದೇಶ ನೀಡಿದ ಅಧಿಕಾರಿಗಳು, ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಇವರು ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಪಟ್ಟು ಹಿಡಿದು ಗಜೇಂದ್ರಗಡ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.