ವಿವಿಧ ಬೇಡಿಕೆ ಈಡೇರಿಸುವಂತೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಹಿತರಕ್ಷಣಾ ಸಮಿತಿ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಖಾಯಂ ಬೋಧಕ/ಬೋಧಕೇತರ ಆಕಾಂಕ್ಷಿ ಅಭ್ಯರ್ಥಿಗಳ ಸಮಿತಿಯು ವಿವಿಧ ಬೇಡಿಕೆ ಈಡೇರಿಸುವಂತೆ ಕಪ್ಪುಪಟ್ಟಿ ಧರಿಸಿ ವಿಶ್ವವಿದ್ಯಾಲಯದ ಆಡಳಿತ ಭವನದ ಎದುರು ಪ್ರತಿಭಟನೆ ಕೈಗೊಂಡಿದ್ದರು. ಇದೇ ವೇಳೆ ವಿಶ್ವವಿದ್ಯಾಲಯ ಕುಲಸಚಿವರಿಗೆ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಖಾಯಂ ನೇಮಕಾತಿ, ವರ್ಷಪೂರ್ತಿ ವೇತನ, ಅತಿಥಿ ಶಿಕ್ಷಕರಿಗೆ 50 ಸಾವಿರ ಸಂಬಳ ಅಥವಾ ಒಂದು ಗಂಟೆ ಬೋಧನೆಗೆ 1500 ರೂ. ನಿಗದಿ ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿದರು.