ಬಸ್ ಹಾಗೂ ಕಾರ್ ಚಾಲಕರನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು
ಗದಗದಲ್ಲಿ ರೈತ ವಿರೋಧಿ ಕಾಯ್ದೆಗಳನ್ನು ಖಂಡಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನಾಕಾರರು ಸಾರಿಗೆ ಬಸ್ ಹಾಗೂ ಕಾರ್ ಚಾಲಕರನ್ನು ತರಾಟೆಗೆ ತೆಗೆದುಕೊಂಡ ಘಟನೆಯು ನಗರದ ಟಿಪ್ಪು ಸುಲ್ತಾನ್ ಸರ್ಕಲ್ ಬಳಿ ನಡೆಯಿತು. ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಪ್ರತಿಭಟನೆ ವೇಳೆ ಬಸ್ ಹಾಗೂ ಕಾರು ತಡೆಗಟ್ಟಲು ಮುಂದಾದರು. ಆಗ ಪೆÇಲೀಸರು ಮಧ್ಯ ಪ್ರವೇಶಿಸಿ ಕಾರು ಹಾಗೂ ಬಸ್ ನಡೆಸಲು ಅನುವು ಮಾಡಿಕೊಟ್ಟರು.