ಜನಪರ ಕಾರ್ಯಗಳೇ ಕಾಂಗ್ರೆಸ್ ಅಭ್ಯರ್ಥಿಗೆ ಶ್ರೀರಕ್ಷೆ ಸತೀಶ್ ಜಾರಕಿಹೊಳಿ | Arabhavi |
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಜನಪರ ಕಾರ್ಯಗಳನ್ನು ಮಾಡಿದ್ದೇವೆ, ಆ ಹೆಮ್ಮೆ ನಮಗಿದೆ. ಆ ಕಾರ್ಯಗಳೇ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿಗೆ ಶ್ರೀರಕ್ಷೆಯಾಗಲಿವೆ ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಅರಭಾವಿ ಮತಕ್ಷೇತ್ರದ ಮೆಳವಂಕಿ, ತಪ್ಪಸಿ ಗ್ರಾಮದಲ್ಲಿ ಬುಧವಾರ ಕಾಂಗ್ರೆಸ್ ಅಭ್ಯರ್ಥಿ ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿ, ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ರಸ್ತೆ, ಕೆರೆ ತುಂಬಿಸುವ ಕಾರ್ಯ, ಕೃಷಿ ಹೊಂಡ, ಶಾಲೆ ಅಭಿವೃದ್ಧಿ ಸೇರಿದಂತೆ ಅನೇಕ ಕಾರ್ಯಕ್ರಮಗಳು ಮಾಡಲಾಗಿದೆ. ಅದೇ ರೀತಿ ಮನಮೋಹನ್ ಸಿಂಗ್ ಕಾಲಾವಧಿಯಲ್ಲಿಯೂ ಕೇಂದ್ರ ಸರ್ಕಾರದಿಂದ ಅನೇಕ ಕೆಲಸಗಳನ್ನು ಮಾಡಿದೆ. ಅವುಗಳೇ ನಮಗೆ ಶ್ರೀರಕ್ಷೆ" ಎಂದಿದ್ದಾರೆ