ಪೋಕ್ಸೋ ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು

ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಸಬ್ ಅರ್ಬನ್ ಪೊಲೀಸ್ ಠಾಣೆ ವತಿಯಿಂದ ಇಂದು ಪೋಕ್ಸೋ ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ನಗರದ ಪೊಲೀಸ್ ಆಯುಕ್ತರ ಕಚೇರಿಯಿಂದ ಇಂದು ಜಾಗೃತಿ ಜಾಥಾಕ್ಕೆ ಡಿಸಿಪಿ ಅಡ್ಡೂರು ಶ್ರೀನಿವಾಸುಲು ಹಸಿರು ಬಾವುಟ ತೋರಿಸುವುದರ ಮೂಲಕ ಚಾಲನೆ ನೀಡಿದರು. ಪೊಲೀಸ್ ಆಯುಕ್ತರ ಕಚೇರಿಯಿಂದ ಡಿಸಿ ಕಚೇರಿವರಗೆ ನಡೆಯಲಿರುವ ಜಾಥಾದಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಇನ್ನೂ ಈ ಬೃಹತ್ ಜಾಥಾದಲ್ಲಿ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಹಾಗೂ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.