ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಘವೇಂದ್ರ ರಾಜ್ ಕುಮಾರ್

ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಘವೇಂದ್ರ ರಾಜ್ ಕುಮಾರ್

ವರನಟ ಡಾ.ರಾಜ್ ಕುಮಾರ್ ಪುತ್ರ ನಟ ರಾಘವೇಂದ್ರ ರಾಜ್ ಕುಮಾರ್ ಇಂದು ತಮ್ಮ 56ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ 1975ರಲ್ಲಿ ತೆರೆಕಂಡ 'ಶ್ರೀ ಶ್ರೀನಿವಾಸ ಕಲ್ಯಾಣ' ಚಿತ್ರದಲ್ಲಿ ಬಾಲಕಲಾವಿದನಾಗಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ಇವರು ನಾಯಕನಾಗಿ ನಟಿಸಿದ ಮೊದಲ ಸಿನಿಮಾ 'ಚಿರಂಜೀವಿ ಸುಧಾಕರ್' 1988ರಲ್ಲಿ ಈ ಚಿತ್ರ ಬಿಡುಗಡೆಯಾಗಿತ್ತು. ನಂತರ ಅದೇ ವರ್ಷ ಅವರ ಮತ್ತೊಂದು ಚಿತ್ರ 'ನಂಜುಂಡಿ ಕಲ್ಯಾಣ' ರಿಲೀಸ್ ಆಗಿತ್ತು ಈ ಸಿನಿಮಾ ಮೂಲಕ ರಾಘವೇಂದ್ರ ರಾಜ್ ಕುಮಾರ್ ಸಾಕಷ್ಟು ಜನಪ್ರಿಯತೆ ಪಡೆದರು.

ರಾಘವೇಂದ್ರ ರಾಜ್ ಕುಮಾರ್ ಇತ್ತೀಚೆಗೆ 'ರಾಜತಂತ್ರ' ಹಾಗೂ ಧ್ರುವ ಸರ್ಜಾ ನಟನೆಯ 'ಪೊಗರು' ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇಂದು ಸೋಷಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳಿಂದ, ಸಿನಿತಾರೆಯರಿಂದ, ಹಾಗೂ ಅವರ ಸ್ನೇಹಿತರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ