ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ :೨೦ ದಿನ ಪ್ರವೇಶ ಬಂದ್

ಮಳೆಗೆ ನಂದಿ ಬೆಟ್ಟದಲ್ಲಿ ಗುಡ್ಡ ಕುಸಿತ :೨೦ ದಿನ ಪ್ರವೇಶ ಬಂದ್
ಚಿಕ್ಕಬಳ್ಳಾಫುರ: ರಾತ್ರಿಯಿಡೀ ಸುರಿದ ಮಳೆಗೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದ ಗುಡ್ಡದಲ್ಲಿ ಭೂ ಕುಸಿತ ಸಂಭವಿಸಿದೆ.
ಬೆಟ್ಟದ ಮೇಲಿಂದ ನೀರು ಹರಿದು ಬಂದು ಬೆಟ್ಟಗಳು ಕುಸಿದಿವೆ.
ರಂಗಪ್ಪ ವೃತ್ತದ ಬಳಿ ಗುಡ್ಡ ಕುಸಿದು ಗಿರಿಧಾಮದ ರಸ್ತೆ ಬಂದ್ ಆಗಿದೆ. ಹೀಗಾಗಿ ನಂದಿ ಬೆಟ್ಟಕ್ಕೆ ಬರುತ್ತಿರುವ ಪ್ರವಾಸಿಗರನ್ನು ಪೊಲೀಸರು ವಾಪಸ್ ಕಳಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ತಾಲೂಕಿನ ನಂದಿ ಗಿರಿಧಾಮದ ಗುಡ್ಡಗಳು ಕುಸಿದಿರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಫುರದ ನಂದಿ ಬೆಟ್ಟ ೨೦ ದಿನ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಹೇಳಿದ್ದಾರೆ.
ಪ್ರವಾಸಿಗರ ಹಿತದೃಷ್ಟಿಯಿಂದ ನಂದಿ ಗಿರಿಧಾಮ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲತಾ ಆರ್. ಹೇಳಿದ್ದಾರೆ.