ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಚಾಲನೆ

ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣೆಗೆ ಹಿರೇಕೆರೂರಿನಲ್ಲಿ ಮಣಿಪಾಲದ ಕುಲಾಧಿಪತಿ ಡಾ. ಎಚ್ ಎಸ್ ಬಲ್ಲಾಳ್ ಅವರು ವರ್ಚುವಲ್ ವೇದಿಕೆಯ ಮೂಲಕ ಮಾಧ್ಯಮ ಮಿತ್ರರಿಗೆ ಕಾರ್ಡ್ ನೀಡುವ ಮೂಲಕ ಚಾಲನೆ ನೀಡಿದರು. ನಂತರ ಡಾ.ಬಲ್ಲಾಳ್ ಮಾತನಾಡಿ, ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಎಂಬುದು ಈ ವರ್ಷದ ಧ್ಯೇಯ ವಾಕ್ಯ. ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಈ ಯೋಜನೆ ಇಂದು ಸುಮಾರು 12ಕ್ಕೂ ಹೆಚ್ಚು ಜಿಲ್ಲೆಗಳಲ್ಲದೇ ಕೇರಳ, ಗೋವಾದಂತಹ ನೆರೆ ರಾಜ್ಯಗಳಿಗೂ ವಿಸ್ತರಣೆ ಆಗಿದೆ. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವ ಪಡೆಯಬಹುದು ಮತ್ತು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಹಿರಿಯ ಕೆ. ಸಚಿನ್ ಕಾರಂತ್, ಸಹಾಯಕ ವ್ಯವಸ್ಥಾಪಕರಾದ ಕೃಷ್ಣಪ್ರಸಾದ ಬಿ ಎಸ್ ಹಾಗೂ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಶ್ರೀನಿವಾಸ್ ಭಾಗವತ್ ಇವರೆಲ್ಲರೂ ಉಪಸ್ಥಿತರಿದ್ದರು.