ಚೆನ್ನೆ : ನಟ ಧನುಷ್ ನಾಯಕನಾಗಿ ಅಭಿವನಯಿಸಿರುವ ಚಿತ್ರದ ಸಾಹಸ ಶೂಟಿಂಗ್ ಚಿತ್ರೀಕರಣದ ಸಂದರ್ಭದಲ್ಲಿ ಸೋಮವಾರ ನಟ ಪ್ರಕಾಶ್ ರೈ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಗಸ್ಟ್ ೫ರಂದು ಆರಂಭಗೊAಡAತ ನಟ ಧನುಷ್ ನಾಯಕನಾಗಿ ನಟಿಸಿರುವ ಚಿತ್ರದ ಶೂಟಿಂಗ್ ಚೆನ್ನೈನಲ್ಲಿ ನಡೆಯುತ್ತಿತ್ತು. ಈ ಶೂಟಿಂಗ್ ನ ಸಾಹಸ ದೃಶ್ಯದ ಚಿತ್ರೀಕರಣದ ಸಂದರ್ಭದಲ್ಲಿ ನಟ ಪ್ರಕಾಶ್ ರೈ ಕೈಗೆ ಗಂಭೀರವಾಗಿ ಪೆಟ್ಟುಬಿದ್ದಿದೆ. ಕೂಡಲೇ ಅವರನ್ನು ಚೈನ್ನೈನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದಿದ್ದಾರೆ. ವೈದ್ಯರು ಶಸ್ತ್ರ ಚಿಕಿತ್ಸೆಗೆ ಸಲಹೆ ಮಾಡಿದ್ದಾರೆ.
ತಕ್ಷಣ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಅಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡ ಬಳಿಕ ಅವರು ಹೈದರಾಬಾದ್‌ಗೆ ತೆರಳಿದ್ದಾರೆ. ಹೈದರಾಬಾದ್‌ನಲ್ಲಿ ಪ್ರಕಾಶ್ ರೈಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ.
ಈ ಕುರಿತಂತೆ ಟ್ಟಿಟ್ಟರ್ ನಲ್ಲಿ ಮಾಹಿತಿ ಹಂಚಿಕೊAಡಿರುವAತ ನಟ ಪ್ರಕಾಶ್ ರೈ ಅವರು, ಒಂದು ಘಟನೆ ನಡೆದಿದೆ. ಹೀಗಾಗಿ ಶಸ್ತ್ರ ಚಿಕಿತ್ಸೆಗಾಗಿ ಹೈದರಾಬಾದ್ ಗೆ ಬಂದಿದ್ದೇನೆ. ಗೆಳೆಯ ಡಾ.ಗುರುವ ರೆಡ್ಡಿ ಶಸ್ತ್ರ ಚಿಕಿತ್ಸೆಗೆ ಒಳಪಡಿಸಿದ್ದಾರೆ. ಯಾವುದೇ ಭಯವಿಲ್ಲ. ಯಾರೂ ಆತಂಕ ಪಡುವುದು ಬೇಡ ಎಂದು ತಿಳಿಸಿದ್ದಾರೆ.