ಭತ್ತ ಖರೀದಿ ಕೇಂದ್ರ ತೆರೆಯಲು ಆಗ್ರಹ

ಭತ್ತ ಖರೀದಿ ಕೇಂದ್ರ ತೆರೆಯಲು ಆಗ್ರಹಿಸಿ, ಕೊಪ್ಪಳದಲ್ಲಿ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದ್ರು. ನಗರದ ಕಾರಟಗಿಯಲ್ಲಿ ರೈತ ಮುಖಂಡ ಕೂಡಿಹಳ್ಳಿ ಚಂದ್ರಶೇಖರ್ ಅವರ ನೇತ್ರತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಭತ್ತ ಖರೀದಿ ಕೇಂದ್ರ ತೆರೆವುಂತೆ ಆಗ್ರಹ ಮಾಡಿ ಸರ್ಕಾರದ ವಚನ ವಿರುದ್ದ ಪ್ರತಿಭಟನೆ ನಡೆಸಿದ್ರು. ಇನ್ನು ಕಾರಟಗಿ ಎಪಿಎಂಸಿ ಯಿಂದ ನವಲಿ ವೃತದ ವರೆಗೆ ರ್ಯಾಲಿ ಮುಲಕ ಪ್ರತಿಭಟನೆ ಮೆರವಣಿಗೆ ನಡೆಸಿದರು. ರೈತ ಸಂಘಟನೆವರು ಎತ್ತಿನ ಬಂಡಿ ಮುಖಾಂತರ ಪ್ರತಿಭಟನೆ ಮೆರವಣಿಗೆ ಮಾಡಿದ್ರು. ಈ ಪ್ರತಿಭಟನೆಯಲ್ಲಿ ನೂರಾರು ರೈತರು ಭಾಗಿಯಾಗಿದ್ದರು. ಈ ಹೋರಾಟಕ್ಕೆ ಕನ್ನಡ ಪರ ಸಂಘಟನೆಗಳು ಕೂಡಾ ಸಾಥ್ ನೀಡಿದ್ರು..