ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲು : ಕೋನರೆಡ್ಡಿ ರಾಜೀನಾಮೆ

ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆಯಲ್ಲಿ ಹೀನಾಯ ಸೋಲು : ಕೋನರೆಡ್ಡಿ ರಾಜೀನಾಮೆ

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡ ಹಿನ್ನೆಲೆಯಲ್ಲಿ ಪಕ್ಷದ ಚುನಾವಣಾ ಉಸ್ತುವಾರಿ ಹೊತ್ತಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್.ಎಚ್.ಕೋನರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಸುದ್ದಿಗೋಷ್ಟಿ ನಡೆಸಿದ ಕೋನರೆಡ್ಡಿ ಅವರು, ಪಕ್ಷದ ವರಿಷ್ಟ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು. ಚುನಾವಣೆ ಪಾರದರ್ಶಕವಾಗಿ ನಡೆದಿಲ್ಲ ಎಂದು ಆರೋಪಿಸಿರುವ ಅವರು ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ, ಸರ್ಕಾರದ ಹಂಗಿಲ್ಲಿದ್ದುಕೊಡೇ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು. ಪಕ್ಷದ ಕಾರ್ಯಕರ್ತರು ಶ್ರಮಿಸಿದ್ದರೂ ಮತದಾರರು ಚುನಾವಣೆಯಲ್ಲಿ ತಮಗೆ ಮತ ಹಾಕಿಲ್ಲ ಎಂದು ಬೇಸರ ಹೊರಹಾಕಿದರು. ಅಲ್ಲದೇ ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ತಾವೇ ಹೊರುವುದಾಗಿ ತಿಳಿಸಿದರು.

ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಶ್ರಮಿಸಿದರೂ ಅದು ಪಕ್ಷದ ಸಾಧ್ಯವಾಗಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷಸಂಘಟನೆಗೆ ಶ್ರಮಿಸುತ್ತೇನೆ. ತಮ್ಮ ರಾಜೀನಾಮೆಯನ್ನು ಪಕ್ಷದ ವರಿಷ್ಟು ಒಪ್ಪಿಕೊಳ್ಳಬೇಕೆಂದು ಇದೇ ವೇಳೆ ಮನವಿ ಮಾಡಿದರು….