SC,ST ಸಮುದಾಯದ ಮೀಸಲಾತಿ ಹೆಚ್ಚಳ : ಸಿಎಂ 'ಬಸವರಾಜ ಬೊಮ್ಮಾಯಿ' ಘೋಷಣೆ |Basavaraj Bommai

SC,ST ಸಮುದಾಯದ ಮೀಸಲಾತಿ ಹೆಚ್ಚಳ : ಸಿಎಂ 'ಬಸವರಾಜ ಬೊಮ್ಮಾಯಿ' ಘೋಷಣೆ |Basavaraj Bommai

ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಗಿಫ್ಟ್ ನೀಡಿದ್ದು, ಮೀಸಲಾತಿ ಹೆಚ್ಚಿಸಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದ

ಇಂದು ನಡೆದ ಸರ್ವಪಕ್ಷಗಳ ಸಭೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದು, ಎಸ್ ಸಿ ಮೀಸಲಾತಿ ಶೇ 15 ರಿಂದ 17, ಎಸ್ ಟಿ ಮೀಸಲಾತಿ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಿದ್ದಾರೆ. ಮೀಸಲಾತಿ ಹೆಚ್ಚಳದ ಕುರಿತು ನಾಳೆಯೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ. ಈ ಮೂಲಕ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಗಿಫ್ಟ್ ನೀಡಿದ್ದಾರೆ.

ಇಂದು ಬಿಜೆಪಿ ಕಾರ್ಯಕಾರಣಿ ಸಭೆ ನಡೆದಿದ್ದು. ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಎಸ್ ಸಿ. ಎಸ್ ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಎಂದು ಹೇಳಿದ್ದರು.

ಸಾಮಾಜಿಕವಾಗಿಯೂ ಹಲವು ಸಮಸ್ಯೆ ಬಗೆಹರಿಸಲು ಬದ್ಧವಾಗಿದ್ದೇನೆ. ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ. ಜನಪರವಾಗಿರುವ ಆಡಳಿತವನ್ನುನಮ್ಮ ಸರ್ಕಾರ ಮಾಡುತ್ತಿದೆ ಚುನಾವಣೆ ದೃಷ್ಟಿಯಿಂದ ಇದು ಮಹತ್ವದ್ದು ಎಂದು ಸಿಎಂ ಹೇಳಿದ್ದರು. ಎಸ್‌ ಟಿ ವರ್ಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಲಾಗಿದ್ದು, ಈ ನಿಟ್ಟಿನಲ್ಲಿ ಕೋರ್‌ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.