'SSLC' ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ತಾಲೂಕು ಮಟ್ಟದಲ್ಲೇ 'ಪ್ರಿಪರೇಟರಿ ಪ್ರಶ್ನೆ ಪತ್ರಿಕೆ' ತಯಾರಿ

ಬೆಂಗಳೂರು: ಎಸ್ ಎಸ್ ಎಲ್ ಸಿ (SSLC) ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಈ ಬಾರಿ ತಾಲೂಕು ಮಟ್ಟದಲ್ಲಿ ಸಿದ್ದಪಡಿಸಲಾಗುತ್ತಿದೆ.
ಹೌದು, ಇದುವರೆಗೆ ರಾಜ್ಯ ಮಟ್ಟದಲ್ಲಿ ನಡೆಯುತ್ತಿದ್ದ ಪ್ರಶ್ನೆ ಪತ್ರಿಕೆ ತಯಾರಿಯ ಜವಾಬ್ದಾರಿಯನ್ನು 2022-23ರ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ.
ಪೂರ್ವ ಸಿದ್ಧತಾ ಪರೀಕ್ಷೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲೇ ನಡೆಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಅನುಮೋದನೆ ನೀಡಿದ್ದಾರೆ. ಮಾದರಿ ಪ್ರಶ್ನೆ ಪತ್ರಿಕೆಯನ್ನು ರಾಜ್ಯದ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್ಗೆ ಅಪ್ಲೋಡ್ ಮಾಡಲಾಗುವುದು. ಆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಅನುಸರಿಸಿ ಬಿಇಒಗಳು ತಮ್ಮ ಹಂತದಲ್ಲಿಯೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಂತರ ಮುದ್ರಣ ಮಾಡಿ ತಾಲೂಕು ಹಂತದ ಸ್ಟ್ಯಾಂಗ್ ರೂಂನಲ್ಲಿ ಸುರಕ್ಷಿತವಾಗಿಡಬೇಕು . ಜಿಲ್ಲಾ ಉಪನಿರ್ದೇಶಕರ ನೇತೃತ್ವದಲ್ಲಿ ಪರೀಕ್ಷೆ ನಡೆಸಬೇಕು, ಆಯಾ ವಿಷಯದ ಪರೀಕ್ಷಾ ದಿನದಂದು ಅವುಗಳನ್ನು ಬಿಗಿ ಭದ್ರತೆಯಲ್ಲಿ ಶಾಲೆಗಳಿಗೆ ವಿತರಣೆ ಮಾಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.