ಶಶಿಕಲಾ ಜೊಲ್ಲೆಯ ಶಾಸಕತ್ವ ವಜಾಗೊಳಿಸಲು ಆಗ್ರಹ

ಶಶಿಕಲಾ ಜೊಲ್ಲೆಯ ಶಾಸಕತ್ವ ವಜಾಗೊಳಿಸಲು ಆಗ್ರಹ

ದಾವಣಗೆರೆ, ಜು.28-ಗರ್ಭಿಣಿಯರು, ಬಾಣಂತಿಯರು ಮತ್ತು ಅಪ್ಠೌಕತೆಯ ಮಕ್ಕಳಿಗೆ ನೀಡುವ ಮೊಟ್ಟೆ ಖರೀದಿಯಲ್ಲಿ ಅಕ್ರಮ ಮಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಶಾಸಕ ಪರಣ್ಣ ಮುನವಳ್ಳಿ ಅವರನ್ನು ಶಾಸಕತ್ವ ಸ್ಥಾನದಿಂದ ವಜಾಗೊಳಿಸಿ ಭ್ರಷ್ಟಾಚಾರ ಕಾಯ್ದೆಯಡಿ ಬಂಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿತು.

ನಗರದ ಕುವೆಂಪು ನಗರದಲ್ಲಿನ ಮಳಾ ಮತ್ತು ಕಲ್ಯಾಣ ಇಲಾಖೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್‍ನ ಪದಾಧಿಕಾರಿಗಳು ಭ್ರಷ್ಟಾಚಾರ ಮಾಡಿರುವ ಶಶಿಕಲಾ ಮತ್ತು ಪರಣ್ಣ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಬಾಗಲಕೋಟೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ವೀಣಾ ಕಾಶಪ್ಪನವರ್ ಮಾತನಾಡಿ, ಸಿದ್ದರಾಮಯ್ಯ ಸಿಎಂ ಆಗಿದ್ದ ಕಾಲದಲ್ಲಿ ಜಾರಿಗೆ ತರಲಾದ ಮಾತೃ ವಂದನಾ ಯೋಜನೆಯನ್ನು ಜಾರಿಗೆ ತರಲಾಯಿತು. ಆದರೆ, ಕಳೆದ 2 ವರ್ಷಗಳ ಹಿಂದೆ ಆಡಳಿತಕ್ಕೆ ಬಂದ ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಿಂದ ಕೂಡಿದ್ದು, ಗರ್ಭಿಣಿಯರು, ಅಪ್ಟೌಕತೆ ಇರುವ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲೂ ಸಚಿವೆ ಶಶಿಕಲಾ ಜೊಲ್ಲೆ ಭ್ರಷ್ಠಾಚಾರ ನಡೆಸಿ ಅಮಾನವೀಯತೆ ಮೆರೆದಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿ ಸಂಧಾನದ ಮೇಲೆ ಪ್ರತಿಜ್ಞಾ ಮಾಡಿ ಮಕ್ಕಳು, ಗರ್ಭಿಣಿಯರ ಹೆಸರಿನಲ್ಲಿ ಭ್ರಷ್ಟಾಚಾರ ನಡೆಸಿರುವ ಶಶಿಕಲಾರವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅಲ್ಲದೇ ಅವರ ವಿರುದ್ದ ತನಿಖೆ ನಡೆಸಬೇಕೆಂದು ಆಗ್ರಸಿದರು.

ದಾವಣಗೆರೆ ಜಿಲ್ಲಾ ಮಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್ , ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಶೆಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷೆ ನಾಗರತ್ನಮ್ಮ, ಸುಷ್ಮಾ ಪಾಟೀಲ್ ಮತ್ತಿತರರು ಮಾತನಾಡಿದರು.

ಮಹಿಳಾ ಕಾಂಗ್ರೆಸ್‍ನ ಕವಿತಾ ಚಂದ್ರಶೇಖರ್, ಆಶಾಮುರುಳಿ, ದ್ರಾಕ್ಷಾಯಣಮ್ಮ, ಬ್ಲಾಕ್ ಅಧ್ಯಕ್ಷರಾದ ರಾಜೇಶ್ವರಿ, ಶುಭಮಂಗಳ, ರಾಧಾಬಾಯಿ, ಗೀತಾ ಪ್ರಶಾಂತ್, ಗೀತಾ ಚಂದ್ರಶೇಖರ್, ಮಂಜಮ್ಮ, ರುದ್ರಮ್ಮ, ಅಯೂಬ್ ಪೈಲ್ವಾನ್, ಪಾಲಿಕೆ ಸದಸ್ಯ ಜಿ.ಎಸ್.ಮಂಜುನಾಥ್, ಎಸ್.ಮಲ್ಲಿಕಾರ್ಜುನ್, ಕೊಡಪಾನ ದಾದಾಪೀರ್, ರಾಕೇಶ್, ಮೊಟ್ಟೆ ದಾದಾಪೀರ್, ಜಿಕ್ರಿಯಾ, ಶ್ರೀಕಾಂತ್ ಬಗರೆ, ಯುವರಾಜ್ ಮತ್ತಿತರರು ಪಾಲ್ಗೊಂಡಿದ್ದರು.