ಸೆ. 25 ರಂದು ಪ್ರತಿಜ್ಞಾ ಪಂಚಾಯತ್ ಅಭಿಯಾನ

ಪಂಚಮಸಾಲಿ 2ಎ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಮತ್ತಷ್ಟು ತೀವ್ರತೆ ನೀಡುವ ಉದ್ದೇಶದಿಂದ ಸೆ. 25 ರಂದು ಗೋಕುಲ ರಸ್ತೆಯ ಗೋಕುಲ ಗಾರ್ಡನ್ನಲ್ಲಿ ಪ್ರತಿಜ್ಞಾ ಪಂಚಾಯತ್ ಅಭಿಯಾನ ಆಯೋಜಿಸಲಾಗಿದೆ ಎಂದು ಪಂಚಮಸಾಲಿ ಹೋರಾಟದ ಸ್ವಾಗತ ಸಮಿತಿ ಅಧ್ಯಕ್ಷ ನಿಂಗಣ್ಣ ಕರಿಕಟ್ಟಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಅಕ್ಟೋಬರ್ 1 ರೊಳಗಾಗಿ ಪಂಚಮಸಾಲಿ ಸಮಾಜದ ಬೇಡಿಕೆಯನ್ನು ಪರಿಗಣಿಸದೇ ಇದ್ದಲ್ಲಿ ಮುಂಬರುವ ದಿನಗಳಲ್ಲಿ ಬೆಂಗಳೂರಿನ ಫ್ರೀಡಮ್ ಪಾಕ್ರ್ನಲ್ಲಿ ಮತ್ತೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಸಮಾಜದ ಯುವ ಘಟಕದ ಅಧ್ಯಕ್ಷ ವಿರೇಶ ಉಂಡಿ ಮಾತನಾಡಿ, ಪ್ರತಿಜ್ಞಾ ಪಂಚಾಯತ್ ಕಾರ್ಯಕ್ರಮಕ್ಕೆ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಮಾಜದ ಜಿಲ್ಲಾ ಘಟಕ, ತಾಲೂಕು ಘಟಕ ಹಾಗೂ ಗ್ರಾಮ ಘಟಕದ ಪ್ರತಿನಿಧಿಗಳು ಸೇರಿದಂತೆ ಸಹಸ್ರಾರು ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಾಗರಾಜ ಗೌರಿ, ಪ್ರಕಾಶ ಬಾವಿಕಟ್ಡಿ, ಬಸವರಾಜ ಮನಗುಂಡಿ ಸೇರಿದಂತೆ ಮುಂತಾದವರು ಇದ್ದರು.