ಸೆ. 5ರೊಳಗೆ ಎಲ್ಲ ಶಿಕ್ಷಕರಿಗೆ ಲಸಿಕೆ: ರಾಜ್ಯಗಳಿಗೆ ಸೂಚನೆ

ನವದೆಹಲಿ: ಶಿಕ್ಷಕರ ದಿನಾಚರಣೆಗೂ ಮುನ್ನ ಎಲ್ಲ ಶಿಕ್ಷಕರಿಗೆ ಲಸಿಕೆ ನೀಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ತಿಳಿಸಿದ್ದಾರೆ.
ಶಿಕ್ಷಕರಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಬೇಕು. ಈ ಉದ್ದೇಶಕ್ಕಾಗಿ ಈ ತಿಂಗಳು ರಾಜ್ಯಗಳಿಗೆ ಹೆಚ್ಚುವರಿಯಾಗಿ 2 ಕೋಟಿಗೂ ಅಧಿಕ ಡೋಸ್ ಲಸಿಕೆ ಪೂರೈಸಲಾಗುವುದು' ಎಂದು ಅವರು ಮಾಡಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇತ್ತೀಚೆಗೆ ಇಳಿಕೆ ಕಂಡು ಬರುತ್ತಿರುವ ಕಾರಣ, ಶಾಲೆಗಳನ್ನು ಆರಂಭಿಸಲು ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳು ಕ್ರಮ ಕೈಗೊಂಡಿವೆ.