ಗಡಿ ನುಸುಳಲು ಯತ್ನಿಸಿದ ಪಾಕ್ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (LOC) ಭಾರತದ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದ್ದ ಉಗ್ರನನ್ನು ಭದ್ರತಾ ಪಡೆ (Security force) ಹೊಡೆದುರುಳಿಸಿದೆ.
ಎಲ್‌ಒಸಿ ಬಳಿ ಅನುಮಾನಾಸ್ಪದ ಚಲನವಲನ ಗಮನಿಸಿದ ಸೇನಾ ಸಿಬ್ಬಂದಿ ತಕ್ಷಣವೇ ಎಚ್ಚೆತ್ತುಕೊಂಡಿದೆ. ಈ ವೇಳೆ ಉಗ್ರರ (terrorist) ಹಾಗೂ ಸೇನಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಗಡಿಯೊಳಗೆ ನುಸುಳಲೆತ್ನಿಸುತ್ತಿದ್ದ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಮೃತ ಉಗ್ರನಿಂದ ಎಕೆ -47 ರೈಫಲ್ (AK 47 rifle) ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.