ಸ್ವಯಂ ಘೋಷಿತ ಆಸ್ತಿ ತೆರಿಗೆ: ವಿನಾಯಿತಿಗೆ ಸಿಎಂ ಜತೆ ಚರ್ಚೆ; ಸಚಿವ ಅಶ್ವತ್ಥನಾರಾಯಣ

ಸ್ವಯಂ ಘೋಷಿತ ಆಸ್ತಿ ತೆರಿಗೆ: ವಿನಾಯಿತಿಗೆ ಸಿಎಂ ಜತೆ ಚರ್ಚೆ; ಸಚಿವ ಅಶ್ವತ್ಥನಾರಾಯಣ

ಸ್ವಯಂ ಘೋಷಿತ ಆಸ್ತಿ ತೆರಿಗೆ: ವಿನಾಯಿತಿಗೆ ಸಿಎಂ ಜತೆ ಚರ್ಚೆ; ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡು ದಂಡ ಮತ್ತು ಬಡ್ಡಿ ಸುಳಿಗೆ ಸಿಲುಕಿರುವ ಆಸ್ತಿ ಮಾಲಕರಿಗೆ ವಿನಾಯಿತಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜತೆ ಚರ್ಚಿಸಲಾಗುವುದು ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಸೋಮವಾರ ಈ ವಿಷಯಕ್ಕೆ ಸಂಬAಧಿಸಿದAತೆ ಬಿಬಿಎಂಪಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ನಂತರ ಮಾತನಾಡಿದ ಅವರು, ಕೋವಿಡ್ ಮಹಾಮಾರಿ ಹಾಗೂ ಲಾ???ಡೌನ್ ಕಾರಣಕ್ಕೆ ಆಸ್ತಿ ಮಾಲಕರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದು, ಇದೇ ವೇಳೆ ದಂಡ ಮತ್ತು ಬಡ್ಡಿಗೆ ಗುರಿಯಾಗಿದ್ದಾರೆ. ಹೀಗಾಗಿ ಕಷ್ಟದಲ್ಲಿರುವ ಆಸ್ತಿ ಮಾಲಕರಿಗೆ ರಿಯಾಯಿತಿ ನೀಡುವ ಬಗ್ಗೆ ಪರಿಶೀಲನೆ ಮಾಡುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ಸೂಚಿಸಿದ್ದೆ. ಆ ಬಗ್ಗೆ ಸಿಎಂ ಒಪ್ಪಿಗೆ ಅಗತ್ಯವಿದೆ ಎಂದು ಹೇಳಿದರು.

ಈಗಾಗಲೇ ಮಲ್ಲೇಶ್ವರ ಮಾತ್ರವಲ್ಲದೆ, ನಗರದ ವಿವಿಧ ವಲಯಗಳ ಜನರು ತಮಗೆ ಮನವಿ ಕೊಟ್ಟಿದ್ದು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಕಷ್ಟದಿಂದ ತಮ್ಮನ್ನು ಪಾರು ಮಾಡಬೇಕೆಂದು ಕೋರಿದ್ದಾರೆ. ಈ ಎಲ್ಲ ಅಂಶಗಳನ್ನು ಸಿಎಂ ಗಮನಕ್ಕೆ ತರಲಾಗುವುದು ಎಂದ ಅವರು, ಬಿಬಿಎಂಪಿಯು ಆರು ವರ್ಷಗಳಿಂದ ಸಮರ್ಪಕವಾಗಿ ತೆರಿಗೆ ವಸೂಲಿ ಮಾಡದೇ ಬಿಟ್ಟಿದ್ದು ಲೋಪ. ಈಗ ನೋಡಿದರೆ ಏಕಾಏಕಿ ದಂಡ-ಬಡ್ಡಿ ಒಟ್ಟಿಗೆ ವಿಧಿಸಿದರೆ ಜನರಿಗೆ ಕಷ್ಟವಾಗುತ್ತದೆ ಎಂದು ತಿಳಿಸಿದರು.
ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಬಸವರಾಜ ಹಾಗೂ ಕಂದಾಯ ವಿಭಾಗದ ಜಂಟಿ ಆಯುಕ್ತ ವೆಂಕಟಾಚಲಪತಿ ಸೇರಿದಂತೆ ಬಿಬಿಎಂಪಿ ಹಿರಿಯ ಅಧಿಕಾರಿಗಳು ಹಾಜರಿದ್ದರು.