ಲೈಂಗಿಕ ಕಿರುಕುಳ ಆರೋಪ, ಬಂಕಾಪುರ ಆರೋಗ್ಯ ಕೇಂದ್ರದ ಮಹಿಳಾ ಸಿಬ್ಬಂದಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಯತ್ನ

ಹಾವೇರಿ ಜಿಲ್ಲೆಯ ಬಂಕಾಪುರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸುಮಾರು 11 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಯೋರ್ವರಿಗೆ ದೈಹಿಕವಾಗಿ ಸಹಕರಿಸುವಂತೆ ಯಲ್ಲಪ್ಪ ಕೋಲೂರು, ದೀಪಕ್ ಉಪಳೆ ಹಾಗೂ ಅವರ ತಂಡದ ಕೆಲವರು ಪದೆ ಪದೇ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ಮಹಿಳಾ ಸಿಬ್ಬಂಧಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹಿಳಾ ಸಿಬ್ಬಂಧಿಯ ಪರಿಸ್ಥಿತಿ ಚಿಂತಾಜನಕವಾಗಿದೆ. ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದಾರೆ. ಈ ಪರಿಸ್ಥಿತಿಯನ್ನು ತಿಳಿದು ಆಕ್ರೋಶಗೊಂಡ ಶಿಗ್ಗಾವಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಇಂದು ಕೈಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಈ ಹೋರಾಟಕ್ಕೆ ಸಾರ್ವಜನಿಕರು ಸಹ ಬೆಂಬಲ ಸೂಚಿಸಿದರು. ಈ ವೇಳೆ, ಪ್ರತಿಭಟನಾ ಸ್ಥಳಕ್ಕೆ ಆಗಮಸಿದ ತಹಿಶೀಲ್ದಾರ್ ಮಂಜುನಾಥ ಮೊನ್ನೋಳ್ಳಿ ಡಿ.ಎಚ್.ಓ. ಎಚ್.ಎಸ್.ರಾಘವೇಂದ್ರಸ್ವಾಮಿ, ಸಿ.ಪಿ.ಐ. ಬಸವರಾಜ ಹಳಬಣ್ಣವರ, ಪಿ.ಎಸ್.ಐ. ಪರುಶರಾಮ ಕಟ್ಟಿಮನಿ, ಪ್ರತಿಭಟನಾ ನಿರತರಿಂದ ಮನವಿ ಸ್ವೀಕರಿಸಿದರು.ಈಗಾಗಲೇ ಓರ್ವನನ್ನು ಬಂಧಿಸಿಲಾಗಿದೆ, ಇತರರ ಮೇಲೆ ಕಾನೂನು ಕ್ರಮ ಕೈಗೊಳಲಾಗುವದು ಎಂದು ತಿಳಿಸಿದರು. ವೈಧ್ಯಾಧಿಕಾರಿ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಅಭಯ ನೀಡಿದ ನಂತರ ಪ್ರತಿಭಟನೆಯನ್ನು ಕೈ ಬಿಡಲಾಯಿತು.