ಅಣ್ಣಿಗೇರಿ ನಗರದಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ದುಷ್ಕರ್ಮಿಗಳಿಂದ ಭಾವಚಿತ್ರಕ್ಕೆ ಅವಮಾನ

ನಗರದ ಅಂಬಿಗೇರಿ ಕ್ರಾಸ್ ನಲ್ಲಿ ಅಳವಡಿಸಿದ್ದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಅವಮಾನಿಸಿದ ಘಟನೆ ನಗರದಲ್ಲಿ ಸಂಭವಿಸಿದೆ, ಭಾವಚಿತ್ರದ ಕೆಳಗಡೆ ಹರಿದು ಅವಮಾನಿಸುತ್ತಾರೆ. ಈ ಸುದ್ದಿ ನಗರದ ತುಂಬಾ ಹಬ್ಬುತ್ತಿದ್ದಂತೆ ಸ್ಥಳೀಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪ್ರತಿಭಟನೆಯನ್ನು ಹಮ್ಮಿಕೊಂಡಿರುತ್ತಾರೆ. ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನಿಸಿದ ಕಿಡಿಗೇಡಿಗಳನ್ನು ಆದಷ್ಟು ಬೇಗನೆ ಬಂಧಿಸ ಬೇಕು ಇಲ್ಲವಾದಲ್ಲಿ ಬರುವ ದಿನಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಂದೇಶ ನೀಡಿರುತ್ತಾರೆ. ಘಟನಾ ಸ್ಥಳಕ್ಕೆ ಅಣ್ಣಿಗೇರಿ ಜನಸ್ನೇಹಿ ಪೊಲೀಸ್ ಠಾಣೆಯ ಪಿಎಸ್ಐ ಲಾಲಸಾಬ್ ಜೂಲಕಟ್ಟಿ, ಸಿಪಿಐ ಚಂದ್ರಶೇಖರ್ ಮಠಪತಿ, ತಾಲೂಕ ದಂಡಾಧಿಕಾರಿ ಮಂಜುನಾಥ ಅಮಾಸೆ, ಹಾಗೂ ಸ್ಥಳೀಯ ಮುಖಂಡರು ಪ್ರತಿಭಟನಾಕಾರರನ್ನು ಮನವೊಲಿಸಲು ಮುಂದ ಆಗಿರುತ್ತಾರೆ.ಆದರೆ ಪ್ರತಿಭಟನಾಕಾರರು ಕಿಡಿಗೇಡಿಗಳನ್ನು ಬಂಧನ ಮಾಡುವವರಿಗೂ ಪ್ರತಿಭಟನೆಯನ್ನು ಹಿಂದೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿರುತ್ತಾರೆ. ಈ ಸಂದರ್ಭದಲ್ಲಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ತಾಲೂಕು ಹಾಗೂ ಸ್ಥಳೀಯ ಪದಾಧಿಕಾರಿಗಳು ಉಪಸ್ಥಿತರಿದ್ದರು