ಸಿಎಂ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಶಿವರಾಮ್ ಹೆಬ್ಬಾರ್ ಕಾರು ಡಿಕ್ಕಿ

ಹುಬ್ಬಳ್ಳಿ, ಜುಲೈ 29: ಉತ್ತರ ಕನ್ನಡ ಜಿಲ್ಲೆಗೆ ಪ್ರವಾಹ ಪರಿಸ್ಥಿತಿ ಪರಿಶೀಲನೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಿಂದ ಕಾರವಾರಕ್ಕೆ ತೆರಳುವ ಸಂದರ್ಭದಲ್ಲಿ ಸಣ್ಣ ಅಪಘಾತವಾಗಿದೆ.
ಮಾಜಿ ಸಚಿವ ಶಿವರಾಮ ಹೆಬ್ಬಾರ್ ಪ್ರಯಾಣಿಸುತ್ತಿದ್ದ ವಾಹನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹುಬ್ಬಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಸಿಎಂ ಬೆಂಗಾವಲು ವಾಹನಕ್ಕೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಇದ್ದ ಕಾರು ಹಿಂಬದಿಯಿಂದ ಡಿಕ್ಕಿಯಾಗಿದೆ. ಶಿವರಾಮ್ ಹೆಬ್ಬಾರ್ ಹಾಗೂ ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ.
ಬೊಮ್ಮಾಯಿ ಹಿಂದೆ ಗಿರಕಿ ಹೊಡಿಯುತ್ತಿರುವ ವಲಸಿಗರು! ಶಿವರಾಮ್ ಹೆಬ್ಬಾರ್ ಹಾಗೂ ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ.
ಸದ್ಯದ ವರದಿಯ ಪ್ರಕಾರ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಅಧಿಕಾರಿಗಳು ಕಾರವಾರಕ್ಕೆ ಯಲ್ಲಾಪುರ, ಅಂಕೋಲಾ ಮೂಲಕ ತೆರಳಿದ್ದಾರೆ.