ಪುಟ್ಕೋಸಿ ವಿರೋಧ ಪಕ್ಷದ ಸ್ಥಾನಕ್ಕಾಗಿ ಸರ್ಕಾರ ಕೆಡವಿದ ಮಹಾನ್ ನಾಯಕ ಸಿದ್ದರಾಮಯ್ಯ

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಮಾಜಿ ಸಿ.ಎಂ. ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೀವು ನನ್ನ ಬಗ್ಗೆ ಮಾತನಾಡಬೇಡಿ, ಗೂಟದ ಕಾರಿಗಾಗಿ ನಿಮ್ಮ ಪಕ್ಷದ 23 ಶಾಸಕರನ್ನು ಬೀದಿಗೆ ತಂದವರು ನೀವು. ಯಡಿಯೂರಪ್ಪ ಸರ್ಕಾರ ಅಸ್ಥಿತ್ವಕ್ಕೆ ಬರಲು ನಿಮ್ಮ ಪಾತ್ ಎಷ್ಟು ಅನ್ನೋದು ನನಗೆ ಗೊತ್ತಿದೆ. ಅಧಿಕಾರಕ್ಕಾಗಿ ನೀವು ಎಷ್ಟೆಷ್ಟು ಕುಟಂತ್ರ ಮಾಡುತ್ತೀರಾ ಅನ್ನೋದು ನನಗೆ ಗೊತ್ತಿದೆ ಎಂದು ಅವರು ಸಿದ್ದರಾಮಯ್ಯ ವಿರುದ್ದ ಗುಡುಗಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾಜಿ ಸಿ.ಎಂ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಅವರು ಮಾತನಾಡುತ್ತಿದ್ದರು.