ಒಂದೇ ಸೂರಿನಡಿ ಅನೇಕ ಸಮಸ್ಯೆಗಳಿಗೆ ಪರಿಹಾರ

ಬೆಂಗಳೂರು

ಜನರು ಸಂಸ್ಕøತಿ ಮತ್ತು ಸಾಧನೆಗಳ ವೈಭವಯುತ ಇತಿಹಾಸ ಸಂಭ್ರಮಿಸುವುದು, ಸ್ಮರಿಸುವ ದೃಷ್ಟಿಯಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಅಝಾದಿ ಕಾ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಆಯುಕ್ತರು ಗೌರವ್ ಗುಪ್ತ ತಿಳಿಸಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಒಂದೇ ಸೂರಿನಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಏಕೀಕೃತ  ವ್ಯವಸ್ಥೆ ಕಲ್ಪಿಸುವ ಸಲುವಾಗಿ ಬೆಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಅಕ್ಟೋಬರ್ 1 ರಿಂದ 3 ರವರೆಗೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ‘ಫ್ರೀಡಂ ಫಾರ್ ವೇಸ್ಟ್’, ‘ಫ್ರೀಡಂ ಫಾರ್ ಟ್ರಾಫಿಕ್’ ಹಾಗೂ ‘ಫ್ರೀಡಂ ಫಾರ್ ಪೆÇಲ್ಯೂಷನ್’ ಎಂಬ ಮೂರು ಪರಿಕಲ್ಪನೆಗಳನ್ನಿಟ್ಟುಕೊಂಡು ಇಸಿಸಿಸಿಯು ಹೇಗೆ ಕಾರ್ಯನಿರ್ವಹಿಸಲಿದೆ, ನಾಗರಿಕರಿಗೆ ಯಾವರೀತಿ ಉಪಯೋಗವಾಗಲಿದೆ ಎಂಬುದರ ಬಗ್ಗೆ ಅಧಿಕಾರಿಗಳು, ವಿದ್ಯಾರ್ಥಿಗಳು, ನಾಗರಿಕರು ಹಾಗೂ ಇನ್ನಿತರರಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು. ಈ ವೇಳೆ ಬೆಂಗಳೂರು ಸ್ಮಾರ್ಟ್ ಸಿಟಿ ಲಿ. ವ್ಯವಸ್ಥಾಪಕ ನಿರ್ದೇಶಕರು ಶ್ರೀ ರಾಜೇಂದ್ರ ಚೋಳನ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.