ಕಾಮಗಾರಿ ಉದ್ಘಾಟನೆ ಸಮಾರಂಭದಲ್ಲಿ ಕೆಲವು ಬದಲಾವಣೆ | Hirekerur |
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಿರೇಕೆರೂರ ಪಟ್ಟಣದ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಶನಿವಾರ ಆಗಮಿಸಲಿದ್ದಾರೆ. ಕೋವಿಡ್ ನಿಯಮಾನುಸಾರ ಈ ಮೊದಲು ನಿಗದಿಪಡಿಸಿದ್ದ ಕಾರ್ಯಕ್ರಮದಲ್ಲಿ ಕೆಲವು ಬದಲಾವಣೆಯಾಗಿದ್ದು, ಹಿರೇಕೆರೂರ ಪಟ್ಟಣದಲ್ಲಿ ನಡೆಯಬೇಕಿದ್ದ ವೇದಿಕೆ ಸಮಾರಂಭದ ಬದಲಾಗಿ, ಕೇವಲ ಉದ್ಘಾಟನಾ ಕಾರ್ಯಕ್ರಮಗಳು ಜರುಗಲಿವೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರದೊಂದಿಗೆ ಪಾಲ್ಗೊಳ್ಳಲು ಮನವಿ ಮಾಡಲಾಗಿದೆ.