ಸುಸಜ್ಜಿತ ಆಸ್ಪತ್ರೆಗಾಗಿ ಶೃಂಗೇರಿ ಬಂದ್

ಸುಸಜ್ಜಿತ ಸರ್ಕಾರಿ ಆಸ್ಪತ್ರೆಗೆ ಆಗ್ರಹಿಸಿ ಶೃಂಗೇರಿಯಲ್ಲಿ ಇಂದು ಆಸ್ಪತ್ರೆ ಹೋರಾಟ ಸಮಿತಿಯ ನೀಡಿರುವ ಬಂದ್ ಕರೆಗೆ ಭಾರಿ ಬೆಂಬಲ ವ್ಯಕ್ತವಾಗಿದೆ.ನೂರು ಬೆಡಗಳ ಸುಸಜ್ಜಿತ ಆಸ್ಪತ್ರೆಗಾಗಿ ಕಳೆದ 14 ವರ್ಷಗಳಿಂದ ಇಲ್ಲಿನ ಜನರು ಸಂಬಂಧಪಟ್ಟವರ ಗಮನಸೆಳೆದರೂ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಶೃಂಗೇರಿ ನಾಗರಿಕರು ಹಾಗೂ ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಬೆಳಿಗ್ಗೆಯಿಂದ ತಮ್ಮ ಅಂಗಡಿ ಮುಗಟ್ಟುಗಳನ್ನು ಮುಚ್ಚಿ ಹೋರಾಟಕ್ಕೆ ತಮ್ಮ ಬೆಂಬಲ ಸೂಚಿಸಿದರು. ಆಟೋ, ಬಸ್ ಸಂಚಾರ ಸಂಪೂರ್ಣ ಸ್ಥಬ್ದಗೊಂಡಿದೆ.ಹೋರಾಟಕ್ಕೆ ವಿವಿಧ ಪಕ್ಷಗಳು, ಸಂಘಟನೆಗಳಿಂದಲೂ ಬಂದ್ ಗೆ ಬೆಂಬಲ ನೀಡಿದ್ದಾರೆ.