9 ದಿನ ಗಣೇಶೋತ್ಸವ ಆಚರಿಸಲು ಶ್ರೀರಾಮ ಸೇನೆ ನಿರ್ಧಾರ | Gadag |
ಗಣೇಶೋತ್ಸವ ಮಾರ್ಗಸೂಚಿಗಳನ್ನು ಪರಿಷ್ಕರಣೆ ಮಾಡಬೇಕೆಂದು ಆಗ್ರಹಿಸಿ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಶ್ರೀರಾಮ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಾಲಾ ಕಾಲೇಜುಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲು ಅವಕಾಶ ಕೊಡದಿದ್ದಕ್ಕೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ ಕಾರ್ಯಕರ್ತರು ಸಾರ್ವಜನಿಕ ಗಣೇಶ ಪ್ರತಿμÁ್ಠಪನೆಗೆ 5 ದಿನ ಕಾಲಾವಕಾಶಕ್ಕೆ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗದಗ ಜಿಲ್ಲೆಯಾದ್ಯಂತ 9 ದಿನ ಗಣೇಶೋತ್ಸವ ಆಚರಿಸಲು ಶ್ರೀರಾಮ ಸೇನೆ ನಿರ್ಧರಿಸಿದ್ದು, ಬೇಡಿಕೆ ಈಡೇರದಿದ್ದರೆ ಆರ್ ಎಸ್ ಎಸ್ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಹೇಳಿದರು.