ಬಸ್ ವ್ಯವಸ್ಥೆ ಕಲ್ಪಿಸದ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಕಾಲೇಜ್ಗಳಿಗೆ ಸರಿಯಾದ ಸಮಯಕ್ಕೆ ಹೋಗಲು ಗದಗ ಜಿಲ್ಲೆಯ ಲಕ್ಷ್ಮೇಶ್ವರ, ಮುಳಗುಂದ ತಾಲೂಕಿನ ವಿದ್ಯಾರ್ಥಿಗಳು ಗೋಳಾಡುತ್ತಿದ್ದಾರೆ. ಬಿಬಿಎ, ಬಿಎ, ಬಿಕಾಂ, ಬಿಎಸ್ಸಿ, ಪಿಯುಸಿ ವಿವಿಧ ಕೋರ್ಸ್ಗಳ ವಿದ್ಯಾರ್ಥಿಗಳು ಲಕ್ಷ್ಮೇಶ್ವರ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸಾಕಷ್ಟು ಮನವಿ ಮಾಡಿದ್ರು ತಲೆಕೆಡಿಸಿಕೊಳ್ಳದ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ. ಒಟ್ಟಿನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತಿದೆ.