ಗನ್‍ನಿಂದ ಶೂಟ್ ಮಾಡಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ
ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ತಲೆಗೆ ಶೂಟ್ ಮಾಡಿಕೊಂಡು ಸ್ವಯಂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸದಾಶಿವ ನಗರದ ವ್ಯಾಪ್ತಿಗೆ ಬರುವ ಇಂಡಿಯನ್ ಏರ್ ಫೆÇೀರ್ಸ್ ಹೆಡ್ ಕ್ವಾರ್ಟರ್ಸ್ ಬಳಿ ಇರುವ ಬಸ್‍ಸ್ಟಾಪಿನಲ್ಲಿ ನಡೆದಿದೆ. ಮೃತಪಟ್ಟಿರುವ 17 ವರ್ಷದ ವಿದ್ಯಾರ್ಥಿಯನ್ನು ರಾಹುಲ್ ಬಂಡಾರಿ ಎಂದು ಗುರುತಿಸಲಾಗಿದ್ದು, ಇತ ಆರ್ಮಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಮುಂಜಾನೆ ಐದು ಗಂಟೆ ಸುಮಾರಿಗೆ ಶೂಟ್ ಮಾಡಿಕೊಂಡು ಸಾವಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಆಗಮಿಸಿದ ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಮಾಹಿತಿ ಕಲೆಹಾಕಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ