ಸಿಎಂ ತವರು ಕ್ಷೇತ್ರದಲ್ಲಿ ಬಸ್ಸಿಗಾಗಿ ವಿದ್ಯಾರ್ಥಿಗಳ ಪರದಾಟ |Shiggaon|
ಹಾವೇರಿ ಜಿಲ್ಲೆ ಶಿಗ್ಗಾಂವ ಸವನೂರ ತಾಲೂಕಿನ ಹಳ್ಳಿಗಳಿಗೆ ಬಸ್ಸಿನ ತೊಂದರೆ ಇದ್ದರೂ ಕೂಡಾ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ವಿದ್ಯಾರ್ಥಿಗಳ ತೊಂದರೆಗೆ ಗಮನಹರಿಸುತ್ತಿಲ್ಲ. ಇದರಿಂದ ಬೇಸತ್ತ ವಿದ್ಯಾರ್ಥಿಗಳು ತಾಲೂಕಿನ ಚಿಕ್ಕ ಮಲ್ಲೂರ ಕಂಕನವಾಡ ಮಂತ್ರೋಡಿ ಇನ್ನು ಹಲವಾರು ಗ್ರಾಮದಲ್ಲಿ ಬಸ್ಸು ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಪಾಲಿಗೆ ಕೆಎಸ್ಆರ್ಟಿಸಿ ಬಸ್ಸಗಳು ಇದ್ದರು ಇಲ್ಲದಂತಾಗಿದೆ ಎಂದು ಹಿಡಿಶಾಪ ಹಾಕುತ್ತಿದ್ದಾರೆ.