ಬಸ್ ನಿಲ್ಲಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಸಮರ್ಪಕವಾಗಿ ಸಾರಿಗೆ ವ್ಯವಸ್ಥೆ ಇಲ್ಲದ ಹಿನ್ನಲೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಬೇವೂರ ಕ್ರಾಸ್ ನಲ್ಲಿ ಬಸ್ ನಿಲ್ಲಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬಸ್ ನಿಲ್ಲಿಸಿ ಕೆ.ಎಸ್.ಆರ್.ಟಿ.ಸಿ. ಮುಲ್ಲಾರನ್ನ ತರಾಟೆಗೆ ತಗೆದುಕೊಂಡ ವಿದ್ಯಾರ್ಥಿಗಳು ಕಾಲೇಜ್ ಸಮಯಕ್ಕೆ ಸಮರ್ಪಕವಾಗಿ ಬಸ್ಗಳು ಬರುತ್ತಿಲ್ಲ. ಇದರಿಂದ ತರಗತಿಗಳಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಆದಷ್ಟು ಬೇಗ ಈ ಸಮಸ್ಯೆ ಬಗೆಹರಿಸಬೇಕೆಂದು ವ್ಯಸವ್ಥೆ ವಿರುದ್ಧ ಆಕ್ರೋಶ ಹೊರಹಾಕಿದರು.