ಅತ್ಯಾಚಾರ ಖಂಡಿಸಿ, ವಿಧ್ಯಾರ್ಥಿಗಳು ಪ್ರತಿಭಟನೆ | Dharwad |
ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ಎಐಡಿಎಸ್ಓ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಸಮಾಧಾನ ಹೊರಹಾಕಿದ ವಿದ್ಯಾರ್ಥಿಗಳು, ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆದರಿಕೆ ಆಗುತ್ತಿದೆ. ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಾಗಿದೆ. ಯುವತಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದು ಖಂಡನೀಯ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಹದಗೆಟ್ಟು ಹೋಗಿದ್ದು, ಪುಂಡರ ಹಾವಳಿ ಹೆಚ್ಚಗಿದೆ. ಕೂಡಲೇ ಅತ್ಯಾಚಾರ ಎಸಗಿದವರನ್ನು ಬಂಧಿಸಿ ಕ್ರೂರ ಶಿಕ್ಷೆಗೆ ಒಳಪಡಿಸಬೇಕೆಂದು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದರು.