ಬಿಜೆಪಿ ಏಜೆಂಟರಾಗಿದ್ದಾರೆ ತಹಶೀಲ್ದಾರ್; ಕಾಂಗ್ರೆಸ್ ಆರೋಪ |Bidar|

ಬಸವಣ್ಣನವರ ಕರ್ಮಭೂಮಿ ಬೀದರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು ಭಾರೀ ಜೋರಾಗಿದ್ದು, ಬಸವಕಲ್ಯಾಣ ತಹಶೀಲ್ದಾರ್ ಸಾವಿತ್ರಿ ಸಲಗರ ಅವರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ.ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಅವರಿಗೆ ಮತ ನೀಡುವಂತೆ ತಹಶೀಲ್ದಾರ್ ಸಾವಿತ್ರಿ ಸಲಗರ ಅವರಿಂದ ಮತದಾರರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಎನ್. ಜಾಬಶೆಟ್ಟಿ ಆರೋಪ ಮಾಡಿದ್ದಾರೆ.