ಶಿಕ್ಷಕರ ದಿನಾಚರಣೆ : ಶಿಕ್ಷಕರನ್ನು ಕೊಂಡಾಡಿದ ನರೇಂದ್ರ ಮೋದಿ

ಶಿಕ್ಷಕರ ದಿನಾಚರಣೆ : ಶಿಕ್ಷಕರನ್ನು ಕೊಂಡಾಡಿದ ನರೇಂದ್ರ ಮೋದಿ

ಇಂದು ದೇಶಾದ್ಯಂತ ಶಿಕ್ಷಕರ ದಿನಾಚರಣೆಯ ಸಂಭ್ರಮ. ಮಾಜಿ ರಾಷ್ಟಪತಿ, ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ಜಯಂತಿಯ. ಈ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಇಡೀ ಶಿಕ್ಷಕ ಸಮುದಾಯಕ್ಕೆ ಶುಭಕಾಮನೆಗಳನ್ನು ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಯುವ ಮನಸ್ಸುಗಳನ್ನು ಬೆಳೆಸುವಲ್ಲಿ ಯಾವಾಗಲೂ ಪ್ರಮುಖ ಪಾತ್ರ ವಹಿಸುವ ಸಂಪೂರ್ಣ ಬೋಧನಾ ಭ್ರಾತೃತ್ವಕ್ಕೆ ಶುಭಾಶಯಗಳು.. ಕೋವಿಡ್-19 ಸಂಕಷ್ಟ ಕಾಲದಲ್ಲಿ ಆನ್ ಲೈನ್ ನಲ್ಲಿ ಮತ್ತು ಇತರ ಮಾರ್ಗಗಳ ಮೂಲಕ ಮಕ್ಕಳಿಗೆ ಶಿಕ್ಷಣವನ್ನು ಧಾರೆಯೆರೆದ ಶಿಕ್ಷಕರ ಪಾತ್ರ ನಿಜಕ್ಕೂ ಶ್ಲಾಘನೀಯ ಎಂದಿದ್ದಾರೆ.

ಡಾ.ಎಸ್. ರಾಧಾಕೃಷ್ಣನ್ ಅವರ ಜಯಂತಿಯಂದು ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಅವರ ವಿಶಿಷ್ಟ ವಿದ್ಯಾರ್ಥಿವೇತನ ಹಾಗೂ ನಮ್ಮ ರಾಷ್ಟ್ರಕ್ಕೆ ನೀಡಿದ ಕೊಡುಗೆಗಳನ್ನು ನೆನಪಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.