ಹೊರಟ್ಟಿಗೆ ದಾಖಲೆಯ ಗೆಲುವು ತನ್ನಿ, ಶಿಕ್ಷಕರಲ್ಲಿ ಬೊಮ್ಮಾಯಿ ಮನವಿ!

ಶಿಕ್ಷಣ ಕ್ಷೇತ್ರದ ಅಮೂಲಾಗ್ರ ಸುಧಾರಣೆಗೆ ಕಳೆದ ನಾಲ್ಕು ದಶಕ ಗಳಿಂದ ಅವಿರತವಾಗಿ ಶ್ರಮಿಸುತ್ತಿರುವ ರಾಜ್ಯದ ಶಿಕ್ಷಕ ಸಮುದಾಯದ ಏಕೈಕ ಆಶಾಕಿರಣವಾಗಿರುವ ಬಸವರಾಜ ಹೊರಟ್ಟಿಯವರು ಶಿಕ್ಷಣ ಕ್ಷೇತ್ರದ ದಂತ ಕಥೆಯಾಗಿದ್ದು ಈ ಬಾರಿಯ ಚುನಾವಣೆಯಲ್ಲಿ ದಾಖಲೆಯ ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ಆದರ್ಶನಗರದ ಡಾ. ಜಿ.ವ್ಹಿ.ಜೋಶಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೊರಟ್ಟಿಯವರ ಚುನಾವಣಾ ಪ್ರಚಾರಾರ್ಥ ನಡೆದ ಶಿಕ್ಷಕರೊಂದಿಗಿನ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. ಹೊರಟ್ಟಿಯವರ ಚುನಾವಣೆ ಎಂದರೆ ಶಿಕ್ಷಕ ಸಮೂಹದಲ್ಲೆಡೆ ಸಂಭ್ರಮ ಮನೆಮಾಡಿ ಹಬ್ಬದ ವಾತಾವರಣ ಸೃಷ್ಟಿಯಾಗುತ್ತದೆ.