ಶವಸಂಸ್ಕಾರಕ್ಕೆ ತೆರಳುತ್ತಿದ್ದ ಗುಂಪಿನ ಮೇಲೆ ಉಗ್ರರ ದಾಳಿ, 8ಕ್ಕೂ ಹೆಚ್ಚು ಮಂದಿ ಬಲಿ
ಬಾಗ್ದಾದ್, ಜು.31- ಶವಸಂಸ್ಕಾರಕ್ಕೆ ತೆರಳುತ್ತಿದ್ದ ಗುಂಪಿನ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ 8ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ಇರಾಕ್ ಸೇನೆ ತಿಳಿಸಿದೆ.
ಶವಸಂಸ್ಕಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಶಸ್ತ್ರಸಜ್ಜಿತ ಉಗ್ರರ ಗುಂಪು ಮನ ಬಂದಂತೆ ದಾಳಿ ನಡೆಸಿರುವ ಪರಿಣಾಮ ಪೊಲೀಸರು ಮತ್ತು ನಾಗರಿಕರು ಸೇರಿದಂತೆ ಹಲವಾರು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಎಷ್ಟು ಮಂದಿ ಉಗ್ರರ ದಾಳಿಗೆ ಬಲಿಯಾಗಿದ್ದಾರೆ ಎಂಬ ಬಗ್ಗೆ ಇರಾಕ್ ಸೇನೆ ನಿಖರ ಮಾಹಿತಿ ನೀಡಿಲ್ಲ. ಆದರೆ ಎಂಟಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಇರಾಕ್‍ನಲ್ಲಿ ಕಳೆದ ಕೆಲವು ದಿನಗಳಿಂದ ಇಸ್ಲಾಮಿಕ್ ಸ್ಟೇಟ್ ಉಗ್ರರು ಪದೇ ಪದೇ ದಾಳಿ ನಡೆಸುತ್ತಿದ್ದು , ಶವಸಂಸ್ಕಾರಕ್ಕೆ ತೆರಳುತ್ತಿದ್ದವರ ಮೇಲೂ ಅದೇ ಸಂಘಟನೆ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ.